ಮೈಸೂರು : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಕನ್ನಡಪರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಖಾಲಿ ಚಿಪ್ಪು ಪ್ರದರ್ಶಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಕನ್ನಡಿಗರು ಪ್ರತಿಭಟಿಸಿದರು.