ಮೈಸೂರು: ಮೈಸೂರಿ ಹೊರವಲಯದ ರಿಂಗ್ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಅಂಡರ್’ಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಮೈಸೂರಯ ನಂಜನಗೂಡು ರಸ್ತೆ ರಿಂಗ್ ರೋಡ್ ನಲ್ಲಿ ನಿರ್ಮಾಣ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಯಾವುದೇ ರೀತಿಯ ವಿಳಂಬವಾಗದಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ರಸ್ತೆ ನಿರ್ಮಾಣ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

