News Karnataka Kannada
Wednesday, May 01 2024
ಮೈಸೂರು

ಬಿಜೆಪಿಯಲ್ಲಿ ಅಸಮಾಧಾನ ಇರುವುದು ಸತ್ಯ: ಒಪ್ಪಿಕೊಂಡ ವಿಜಯೇಂದ್ರ

It's true that there is resentment in BJP: Vijayendra
Photo Credit : News Kannada

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಬಳಿಕ ಬಸವನ ಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಅರವಿಂದ ಬೆಲ್ಲದ್‌ ಮೊದಲಾದವರು ಮುನಿಸಿಕೊಂಡಿದ್ದಾರೆ.

ಈ ಬಗ್ಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ. ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ.

ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು