ಮೈಸೂರು: ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದ್ದು, ಪುಟ್ಬಾತ್ ವ್ಯಾಪಾರಿಗಳಿಗೆ ಶಾಕ್ ನೀಡಲಾಗಿದೆ. 30ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳು ನೆಲಸಮವಾಗಿದೆ.

ಮೈಸೂರು ಮಹಾನಗರ ಪಾಲಿಕೆಯ ವಲಯ 5 ರಲ್ಲಿ ತೆರವು ಕಾರ್ಯ ನಡೆದಿದೆ. ಕೆ.ಆರ್.ಎಸ್ ರಸ್ತೆಯಲ್ಲಿ ಅನಧಿಕೃತ ಅಂಗಡಿ ಮಳಿಗೆಗಳು ನಿರ್ಮಿಸಲಾಗಿದೆ. ಪೆಟ್ಟಿಗೆ ಅಂಗಡಿಗಳು, ಶೆಡ್ಡುಗಳು, ತಳ್ಳುವ ಗಾಡಿಗಳು, ಜಾಹೀರಾತು ಫಲಕಗಳ ತೆರವುಗೊಳಿಸಲಾಗಿದೆ.

ಸಾರ್ವಜನಿಕರ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಡುವ ಉದ್ದೇಶದಿಂದ ತೆರವು ಕಾರ್ಯಚರಣೆ ಮಾಡಲಾಯಿತು.ಬೆಂಗಳೂರು ಬಳಿಕ ಮೈಸೂರಿನಲ್ಲೂ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದಾರೆ.