ಮೈಸೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಮಳೆಯಿಂದಾಗಿ ಕಬಿನಿ ಜಲಾಶಯ ತುಂಬಿ ಹರಿಯುತ್ತಿದೆ. ಹೀಗಾಗಿ 36 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಮಳೆಯಿಂದಾಗಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಕಪಿಲಾ ನದಿಗೆ ನೀರು ಬಿಡುಗಡೆ ಹಿನ್ನೆಲೆ, ನದಿ ದಡದ ನಿವಾಸಿಗಳು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ. ಕಬಿನಿ ಡ್ಯಾಂ ಉಕ್ಕಿ ಹರಿಯುತ್ತಿದ್ದು, ಅಲ್ಲಿನ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

