News Karnataka Kannada
Saturday, April 20 2024
Cricket
ಮೈಸೂರು

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯಿಂದ 108 ಕಳಸಾಭಿಷೇಕ

ನಗರದ ಅಗ್ರಹಾರದಲ್ಲಿರುವ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಮಂಗಳವಾರ ಭೇಟಿ ನೀಡಿ, 13ನೇ ವಾರ್ಷಿಕೋತ್ಸವ ಅಂಗವಾಗಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು 108 ಕಳಸಾಭಿಷೇಕ ನೆರವೇರಿಸಿದರು.
Photo Credit : NewsKarnataka

ನಂಜನಗೂಡು: ನಗರದ ಅಗ್ರಹಾರದಲ್ಲಿರುವ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಮಂಗಳವಾರ ಭೇಟಿ ನೀಡಿ, 13ನೇ ವಾರ್ಷಿಕೋತ್ಸವ ಅಂಗವಾಗಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು 108 ಕಳಸಾಭಿಷೇಕ ನೆರವೇರಿಸಿದರು.

ನಂಜನಗೂಡು ಪುರ ಪ್ರವೇಶಿಸುತ್ತಿದ್ದಂತೆ ಅವರನ್ನು ಭಕ್ತಿಯಿಂದ ಬರಮಾಡಿಕೊಂಡ ಭಕ್ತರು, ಪ್ರಸನ್ನ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ಆರತಿ ಬೆಳಗಿ ನೇರವಾಗಿ ಯುವ ಬ್ರಿಗೇಡ್ ಕಾರ್ಯಕರ್ತರ ಸಮ್ಮುಖದಲ್ಲಿ ಬೈಕ್ ರ್ಯಾಲಿ ಮೂಲಕ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಆಗಮಿಸಿದರು. ನಂತರ ಧ್ಯಾನ ಮಂದಿರದಲ್ಲಿ ಕೃಷ್ಣ ಪರಮಾತ್ಮರಿಗೆ 108 ಕಳಸಾಭಿಷೇಕ ನೆರವೇರಿಸಿ ಧಾರ್ಮಿಕ ಪೂಜಾ ಕೈಂಕರ್ಯವನ್ನು ನೆರವೇರಿಸಿದರು.

ಸೋಮವಾರವಷ್ಟೇ ಶೃಂಗೇರಿ ಮಠದ ವಿಭೂಶೇಖರ ಭಾರತಿ ಶ್ರೀಗಳಿಂದ ಲೋಕಾರ್ಪಣೆಗೊಂಡ ಗಣಪತಿ ದೇವಾಲಯಕ್ಕೂ ಭೇಟಿನೀಡಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಮಂತ್ರಾಕ್ಷತೆ, ಫಲ ಪುಷ್ಪ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ನೆರೆದಿದ್ದರು. ಬಳಿಕ ಮೈಸೂರಿಗೆ ತೆರಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು