News Karnataka Kannada
Saturday, April 27 2024
ಮೈಸೂರು

ನಂಜುಂಡೇಶ್ವರನ ದರ್ಶನ ಪಡೆದು ತುಲ ಭಾರ ಸೇವೆ ನೆರವೇರಿಸಿದ ಹೆಚ್‌ ಡಿ ಕೆ

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ದೇವರ ದರ್ಶನ ಪಡೆದುಕೊಂಡರು
Photo Credit : NewsKarnataka

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ದೇವರ ದರ್ಶನ ಪಡೆದುಕೊಂಡರು.

ಪ್ರತಿ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ ಸೇರಿದಂತೆ ಇಡೀ ಕುಟುಂಬ ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಬಂದು ದೇವರ ದರ್ಶನ ಮಾಡಿ ಪ್ರಸಾದ ಪಡೆದ ಬಳಿಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುವುದು ಸಾಕಷ್ಟು ವರ್ಷಗಳ ನಂಬಿಕೆಯಾಗಿದೆ.

ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹೆಚ್.ಡಿ ಕುಮಾರಸ್ವಾಮಿ ನಂಜುಂಡೇಶ್ವರನ ವರ ಪಡೆದು ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹರಕೆ ಹೊತ್ತು ಹೊರ ನಡೆದಿದ್ದಾರೆ. ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಕ್ಷೀಣಿಸಿದ ಕಾರಣ ದೇವಾಲಯಕ್ಕೆ ಬಂದು ಜನರ ಸೇವೆಗೆ ಅವಕಾಶ ಕಲ್ಪಿಸಿದರೆ ತುಲ ಭಾರ ನೆರವೇರಿಸುತ್ತೇನೆ ಎಂದು ನಂಜುಂಡನಿಗೆ ಹರಕೆ ಒತ್ತಿದ್ದರು. ಅದರಂತೆ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ತುಲ ಭಾರವನ್ನು ನೆರವೇರಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ವೇಳೆ ಶಾಸಕ ಜಿ ಟಿ ದೇವೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವಾರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು