Categories: ಮೈಸೂರು

ನಂಜುಂಡೇಶ್ವರನ ದರ್ಶನ ಪಡೆದು ತುಲ ಭಾರ ಸೇವೆ ನೆರವೇರಿಸಿದ ಹೆಚ್‌ ಡಿ ಕೆ

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ದೇವರ ದರ್ಶನ ಪಡೆದುಕೊಂಡರು.

ಪ್ರತಿ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ ಸೇರಿದಂತೆ ಇಡೀ ಕುಟುಂಬ ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಬಂದು ದೇವರ ದರ್ಶನ ಮಾಡಿ ಪ್ರಸಾದ ಪಡೆದ ಬಳಿಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುವುದು ಸಾಕಷ್ಟು ವರ್ಷಗಳ ನಂಬಿಕೆಯಾಗಿದೆ.

ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹೆಚ್.ಡಿ ಕುಮಾರಸ್ವಾಮಿ ನಂಜುಂಡೇಶ್ವರನ ವರ ಪಡೆದು ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹರಕೆ ಹೊತ್ತು ಹೊರ ನಡೆದಿದ್ದಾರೆ. ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಕ್ಷೀಣಿಸಿದ ಕಾರಣ ದೇವಾಲಯಕ್ಕೆ ಬಂದು ಜನರ ಸೇವೆಗೆ ಅವಕಾಶ ಕಲ್ಪಿಸಿದರೆ ತುಲ ಭಾರ ನೆರವೇರಿಸುತ್ತೇನೆ ಎಂದು ನಂಜುಂಡನಿಗೆ ಹರಕೆ ಒತ್ತಿದ್ದರು. ಅದರಂತೆ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ತುಲ ಭಾರವನ್ನು ನೆರವೇರಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ವೇಳೆ ಶಾಸಕ ಜಿ ಟಿ ದೇವೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವಾರು ಭಾಗವಹಿಸಿದ್ದರು.

Nisarga K

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

1 min ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

8 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

25 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

52 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago