ಮೈಸೂರು: ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಕನ್ನಕಳವು ಮಾಡುವ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿಯಿಂದ 2,60,000/- ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಪದಾರ್ಥ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಆಂಧ್ರಪ್ರದೇಶದ ಈಸ್ಟ್ ಗೋದಾವರಿ ಜಿಲ್ಲೆಯ ಪಾಲಂ ಗ್ರಾಮ ಮೂಲದ ನಿವಾಸಿಯಾಗಿದ್ದಾನೆ. ಕುವೆಂಪುನಗರ ಠಾಣಾ ವ್ಯಾಪ್ತಿಯ 03 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿದೆ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ವಿರುದ್ದ ಹುಬ್ಬಳ್ಳಿ, ಮಂಗಳೂರು ಪೊಲೀಸ್ ಠಾಣೆಗಳು ಹಾಗೂ ಆಂಧ್ರ ಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸ್ವತ್ತು ಕಳವು ಪ್ರಕರಣಗಳು ದಾಖಲಾಗಿವೆ.

