ನಂಜನಗೂಡು: ನಂಜನಗೂಡಿನಲ್ಲಿ ಕಳ್ಳತನ, ಕೊಲೆ ಸುಲಿಗೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿಕಾರಿದರು.

ನಂಜನಗೂಡಿನಲ್ಲಿ ಮಾಜಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿ, ಕಸುವಿನಹಳ್ಳಿ, ಹಾಡ್ಯ, ಹೆಡಿಯಾಲ ಸಹಕಾರ ಸಂಘದ ಚುನಾವಣೆಯನ್ನು ಮುಂದೂಡಲಾಗುತ್ತದೆ. ಚುನಾವಣೆಗೆ ನಿಗದಿಯಾಗಿರುವುದನ್ನು ಪೊಲೀಸರು ತಡೆದಿದ್ದಾರೆ.

ಚುನಾವಣೆಗಳನ್ನು ನಡೆಸಲೇಬೇಕು. ಸ್ಥಳೀಯ ಚುನಾವಣೆಗಳನ್ನು ಮುಂದೂಡಲಾಗುತ್ತಿದೆ. ಕಾರಣ ಕೇಳಿದರೆ ಪೊಲೀಸರ ಕೊರತೆ ಇದೆ ಎಂದು ಕಾರಣ ನೀಡುತ್ತಿದ್ದಾರೆ. ಪೊಲೀಸರ ಕೊರತೆ ಎದ್ದು ಕಾಣುತ್ತಿದೆ. ನಂಜನಗೂಡಿನಲ್ಲಿ ಕಳ್ಳತನ, ಕೊಲೆ, ಸುಲಿಗೆ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಒಂಟಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಐದು ವರ್ಷ ಶಾಸಕನಾಗಿದ್ದ ಸಂದರ್ಭದಲ್ಲಿ ಯಾವುದೇ ಪ್ರಕರಣಗಳು ನಡೆಯುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ದೇವಸ್ಥಾನ ವಿಚಾರದಲ್ಲಿ ಎಂಜಲು ನೀರು ಎರಚಿದ ಪ್ರಕರಣದಲ್ಲಿ ಎಷ್ಟು ಜನರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಶಾಸಕ ಬಿ.ಹರ್ಷವರ್ಧನ್, ಮಾಜಿ ಜಿಪಂ ಸದಸ್ಯ ಚಿಕ್ಕರಂಗನಾಯಕ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಕೆಂಡಗಣ್ಣಪ್ಪ, ಬಿಜೆಪಿ ಪಟ್ಟಣ ಅಧ್ಯಕ್ಷ ಎಸ್.ಸಿದ್ದರಾಜು, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಬಾಲಚಂದ್ರು, ಪ್ರಧಾನ ಕಾರ್ಯದರ್ಶಿಗಳಾದ ಮಹದೇವಪ್ರಸಾದ್, ರಾಘವೇಂದ್ರ, ಪುಟ್ಟಸ್ವಾಮಿ, ಸಿದ್ದರಾಜು, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸಿಂಧುವಳ್ಳಿ ಕೆಂಪಣ್ಣ, ಹೊರಳವಾಡಿ ಮಹೇಶ್, ಮಂಜುನಾಥ್, ಹುರಾ ಚಂದ್ರು, ಉಮೇಶ್, ಕೃಷ್ಣಪ್ಪ, ಮಹದೇವಸ್ವಾಮಿ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.