Categories: ಮೈಸೂರು

ಸಾಲದ ಶೂಲಕ್ಕೆ ಬಲಿಯಾದ ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾವಿಗೆ ಶರಣು

ನಂಜನಗೂಡು : ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿದೀಪವಾಗಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಹದೇವಪ್ಪ ಎಂಬುವರರ ಪುತ್ರ ಮಾದಪ್ಪ 45 ವರ್ಷದ ಮೃತ ಉಪನ್ಯಾಸಕ ಎಂದು ತಿಳಿದು ಬಂದಿದೆ.

ನಂಜನಗೂಡು ಪಟ್ಟಣದ ವಿ.ಎ ಲೇಔಟ್ ನಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ನೂತನ ಮನೆ ಗೃಹಪ್ರವೇಶವು ಕೂಡ ನಡೆದಿತ್ತು. ಚಾಮರಾಜನಗರ ಜಿಲ್ಲಾ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಕಷ್ಟು ವರ್ಷಗಳಿಂದಲೂ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತ ಉಪನ್ಯಾಸಕ ಮಾದಪ್ಪ ಎಂಬುವವರ ಪತ್ನಿ ಪೂರ್ಣಿಮಾ ಎಂಬುವರು ಕೂಡ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಪತಿ ಪತ್ನಿ ಅನ್ನೋನ್ಯವಾಗಿ ಜೀವನ ಸಾಗಿಸುತ್ತಿದ್ದ ಇವರಿಬ್ಬರಿಗೆ 16 ವರ್ಷದ ಪುತ್ರಿಯೂ ಕೂಡ ಇದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಘು, ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲು ಮಾಡಿಕೊಂಡು ಶವವನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈಗಾಗಲೇ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿರುವ ಉಪನ್ಯಾಸಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿದೆ..? ಪೊಲೀಸರ ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಲಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chaitra Kulal

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

27 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

52 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago