ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂಡ್ಲೂರು, ಮನ್ನೆಹುಂಡಿ, ಡಣಾಯಕನಪುರ, ಬಿಳಗೆರೆ ಹುಂಡಿ ಗ್ರಾಮಗಳಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿದರು.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೇಂದ್ರ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಂದು ಸಹಕಾರ ಸಂಘ ಸ್ಥಾಪನೆ ಯೋಜನೆಯ ಬಿಲಗೆರೆಹುಂಡಿ ಗ್ರಾಮದಲ್ಲಿ ನೂತನವಾಗಿ ಸ್ಥಾಪನೆಯಾಗಿದ್ದ ಕಚೇರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೆರವೇರಿಸಿದರು.

ಬಿಲಗೆರೆಹುಂಡಿ ಸಹಕಾರ ಸಂಘಕ್ಕೆ ನೂತನ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ನಿವೇಶನ ಮತ್ತು ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶೇಖರ್, ಕಾರ್ಯದರ್ಶಿ ಸಿದ್ದರಾಜು ಸೇರಿದಂತೆ ಸಂಘದ ನಿರ್ದೇಶಕರುಗಳು ಇದ್ದರು.