ಮೈಸೂರು: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿ ಕಾರ್ಮಿಕರಿಂದ ರಕ್ಷಣೆ ಮಾಡಲಾಗಿರುವ ಘಟನೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಬ್ಬಿನ ಗದ್ದೆಯಲ್ಲಿ ಮೂರು ಮರಿಗಳ ಪ್ರತ್ಯಕ್ಷವಾಗಿದೆ. ಗ್ರಾಮದ ಸುತ್ತಮುತ್ತ ಚಿರತೆ ಭೀತಿಯುಂಟಾಗಿದೆ. ಕಬ್ಬಿನ ಗದ್ದೆಯಲ್ಲಿ ಮರಿಹಾಕಿ ತಾಯಿ ಚಿರತೆ ಹೊರಹೋಗಿದ್ದು, ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

