ಮೈಸೂರು: ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ.
ಕೆಲ ದಿನಗಳ ಹಿಂದೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಸು ಕಟ್ಟಿ ಬೋನು ಇರಿಸಿದ್ದರು. ಈ ವೇಳೆ ಹಸುವನ್ನು ತಿನ್ನಲು ಬಂದ ಸುಮಾರು 4ರಿಂದ 5 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು, ಸೂಕ್ತ ಸ್ಥಳಕ್ಕೆ ರವಾನಿಸಿದ್ದಾರೆ.

