ನಂಜನಗೂಡು: ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ರೈತ ಚೇತನ್ ಎಂಬುವವರ ಜಮೀನಿನಲ್ಲಿ ರಾತ್ರಿಯ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಜಮೀನಿನ ಬಳಿ ಬಂದಿರುವ ಚಿರತೆಯನ್ನು ಚೇತನ್ ತಮ್ಮ ಮೊಬೈಲ್ ಕ್ಯಾಮೆರಾದಿಂದ ಸೇರೆ ಹಿಡಿದಿದ್ದಾರೆ. ಜಮೀನಿನಲ್ಲಿದ್ದ ಸಾಕು ನಾಯಿಯನ್ನು ಹೊತ್ತೊಯ್ದು ತಿಂದು ಹಾಕಿದೆ. ಇದರಿಂದ ಗ್ರಾಮಸ್ಥರು ಭಯಭೀತಿಯಲ್ಲಿದ್ದು, ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

