ತಿ. ನರಸೀಪುರ: ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಟಿ ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಚಿರತೆ ಸಂಚಾರದ ದೃಶ್ಯ ಸೆರೆಯಾಗಿದೆ.
ಗ್ರಾಮದ ಒಳಗೆ ಚಿರತೆ ಬರೋ ದೃಶ್ಯ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

