ಮೈಸೂರು: ತಳೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಳೂರು ಗ್ರಾಮದ ರವಿಕುಮಾರ್ ಎಂಬುವವರ ಮನೆ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ಮೈಸೂರು ಜಿಲ್ಲೆ ಜಯಪುರ ಹೋಬಳಿಯಲ್ಲಿರುವ ತಳೂರು ಗ್ರಾಮದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ವೇಳೆಯಲ್ಲಿ ಚಿರತೆ ಓಡಾಟ ನಡೆಸಿದೆ. ಈ ಹಿಂದೆ ಇದೇ ಗ್ರಾಮದಲ್ಲಿ ಹಲವು ಬಾರಿ ಚಿರತೆ ಕಾಣಿಸಿಕೊಂಡಿದೆ. ತಳೂರು ಗ್ರಾಮದಲ್ಲಿ ಆಗ್ಗಿಂದಾಗೆ ಚಿರತೆಗಳು ಕಾಣಿಸಿಕೊಂಡಿದೆ. ಚಿರತೆ ಓಡಾಟದ ಮಾಹಿತಿ ನೀಡಿದರೂ ಅರಣ್ಯಾಧಿಕಾರಿಗಳು ಕ್ಯಾರೇ ಎನ್ನುವುದಿಲ್ಲ.

