ಟಿ ನರಸೀಪುರ: ತಾಲ್ಲೂಕಿನಲ್ಲಿ ಚಿರತೆ ಆತಂಕ ಹೆಚ್ಚಾಗಿದ್ದು, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಹುಂಡಿ ಕೂಡ್ಲುರು ರಸ್ತೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಬೈಕ್ ಸವಾರರ ಮುಂದೆ ಚಿರತೆ ರಸ್ತೆ ದಾಟಿದೆ. ಬೈಕ್ ಸವಾರರ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದೆ. ಪದೇ ಪದೇ ಚಿರತೆ ಪ್ರತ್ಯಕ್ಷ ಹಿನ್ನೆಲೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಗೊಂಡಿದ್ದಾರೆ.
ಚಿರತೆ ಸೆರೆಗೆ ಅರಣ್ಯಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅರಣ್ಯ ಅಧಿಕಾರಿ ಉಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇವೆ ಚಿರತೆ ಸೆರೆಗಾಗಿ ಬೋನ್ ಇರಿಸಲಾಗಿದೆ ಎಂದರು.

