ಮೈಸೂರು: ಜೆಎಲ್ ಬಿ ರಸ್ತೆಯಲ್ಲಿರುವ ರಾಜಬ್ರಹ್ಮ ಸಂಗೀತ ಸಭಾಂಗಣದಲ್ಲಿ ಪಾತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಸಾಹಸಸಿಂಹ ವಿಷ್ಣುವರ್ಧನ್ ನಟಿಸಿರುವ ಚಿತ್ರಗೀತೆಗಳ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ.
30ಕ್ಕೂ ಹೆಚ್ಚು ಹಾಡುಗಳನ್ನು ಹಿರಿಯ ಕಲಾವಿದ ಡಾ ಎ ಡಿ ಶ್ರೀನಿವಾಸ್ ತಂಡದವರು ಹಾಡಿದರು. ಅದಕ್ಕೂ ಮುನ್ನ ವಿಷ್ಣುವರ್ಧನ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ದೀಪಾ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪರಮಪೂಜ್ಯ ಇಳೈಆಳ್ವಾರ್ ಸ್ವಾಮೀಜಿ ರವರು ನಂತರ ಶುಭ ಕೋರಿದರು.
ನಂತರ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಸಾಹಸ ಸಿಂಹ, ಕನ್ನಡಿಗರ ಕಣ್ಮಣಿ ಡಾ. ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ ಎಂದು ಹೇಳಿದರು.
ಪಾತಿ ಫೌಂಡೇಶನ್ ಅಧ್ಯಕ್ಷರಾದ ಎಂ ಡಿ ಪಾರ್ಥಸಾರಥಿ ಮಾತನಾಡಿ, ನಟರಾದ ಡಾ.ರಾಜ್ಕುಮಾರ್, ವಿಷ್ಣು ವರ್ಧನ್, ಅಂಬರೀಶ್ ಅವರು ಸಿನಿಮಾಗಳ ಮೂಲಕ ಸಮಾಜಕ್ಕೆ ಹಲವು ಒಳ್ಳೆಯ ಸಂದೇಶಗಳನ್ನು ನೀಡಿದ್ದಾರೆ. ಆವುಗಳನ್ನು ಜನರು ಅಳವಡಿಸಿಕೊಳ್ಳಬೇಕು. ಒಮ್ಮೆ ಕೆಲಸದ ಒತ್ತಡ ಹೆಚ್ಚಾದಾಗ ಮನಸ್ಸಿನ ನೆಮ್ಮದಿಗೆ ನಾನೂ ಹಾಡು ಕೇಳುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಮಾಜಿ ಅಧ್ಯಕ್ಷರಾದ ವೈ ಡಿ ರಾಜಣ್ಣ, ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ, ಪತಿ ಫೌಂಡೇಶನ್ ಅಧ್ಯಕ್ಷರಾದ ಎಂ ಡಿ ಪಾರ್ಥಸಾರಥಿ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ, ನಿರ್ದೇಶಕ ಶಿವಪ್ರಸಾದ್, ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್, ಕಲಾವಿದರಾದ ಆನಂದ್, ಟಿ ಎಸ್ ಅರುಣ್, ಸೇರಿದಂತೆ ಇನ್ನಿತರರು ಹಾಜರಿದ್ದರು.

