News Karnataka Kannada
Wednesday, April 17 2024
Cricket
ಮಡಿಕೇರಿ

ಕೊಡವ ಕುಟುಂಬಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ

Kodava
Photo Credit : News Kannada

ಮಡಿಕೇರಿ: ಕೊಡವ ಕುಟುಂಬಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಕೊಡವಕೇರಿಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಫೀ.ಮಾ.ಕಾರ್ಯಪ್ಪ ಅವರ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕೆಂದು ಸಹಕಾರಿ ಮಾಜಿ ಹೆಚ್ಚುವರಿ ರಿಜಿಸ್ಟ್ರಾರ್ ಹಾಗೂ ಕೆಎಟಿ ನಿವೃತ್ತ ಸದಸ್ಯ ಕಲ್ಲುಮಾಡಂಡ ಜಿಮ್ಮಿ ಮಾದಯ್ಯ ಕಿವಿಮಾತು ಹೇಳಿದರು.

ನಗರದ ಕೊಡವ ಸಮಾಜದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕೊಡವಕೇರಿಯ 15ನೇ ವರ್ಷದ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿ,

ಕೊಡವ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿಯನ್ನು ಬಾಲ್ಯದಿಂದಲೇ ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು, ಪೋಷಕರು ಸಾಂಪ್ರಾದಾಯಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಮೂಲಕ ಹಿಂದಿನ ಪದ್ಧತಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕೊಡಗಿನ ಸಾಧಕರನ್ನು ಒಳಗೊಂಡಿರುವ ಕಾರ್ಯಪ್ಪ ಕೊಡವಕೇರಿ ಮುಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದು, ಅಗ್ರ ಸ್ಥಾನದಲ್ಲಿರುವುದು ಹೆಮ್ಮೆಯ ವಿಚಾರವೆಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಳಂಗಂಡ ಎ.ಭಾಗೀರಥಿ ಮಾತನಾಡಿ, ಮಕ್ಕಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳ ಜ್ಞಾನ ಹೆಚ್ಚುತ್ತದೆ. ಅಲ್ಲದೆ ಸ್ಪರ್ಧಾತ್ಮಕವಾಗಿ ಬೆಳವಣಿಗೆ ಕಾಣಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯಪ್ಪ ಕೊಡವ ಕೇರಿಯ ಅಧ್ಯಕ್ಷ  ಬೋಡಂಡ ಮುತ್ತಪ್ಪ ಕೊಡವ ಕೇರಿ ಎನ್ನುವುದು ಒಂದು ಕುಟುಂಬ ಇದ್ದಂತೆ. ಕೊಡವ ಕುಟುಂಬಗಳು ತಮ್ಮ ಆಚಾರ, ವಿಚಾರ ಪದ್ಧತಿಯನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ನೀಡಬೇಕು. ಸದಸ್ಯರ ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಸರ್ವರು ಒಗ್ಗಟ್ಟಿನಿಂದ ಸಹಕಾರ ನೀಡುವ ಮೂಲಕ ಸ್ಪಂದಿಸುವಂತಾಗಬೇಕು ಎಂದರು.

ಪ್ರಸ್ತುತ ಕೊಡವರು ವಿವಿಧ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಬೆಳವಣಿಗೆಯನ್ನು ಸಾಧಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವಂತೆ ನೋಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಕೊಡವ ವೆಲ್‌ಫೇರ್ ಮತ್ತು ರಿಕ್ರಿಯೇ?ನ್ ಅಸೋಸಿಯೇಷನ್ ಅಧ್ಯಕ್ಷ ಕುಕ್ಕೆರ ಜಯ ಚಿಣ್ಣಪ್ಪ ಮಾತನಾಡಿ, ಹಿಂದೆ ಕೊಡಗು ಎಂದರೆ ಕೊಡವರು ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಕೊಡವರು ತಮ್ಮ ಭೂಮಿಯನ್ನು ಮಾರಾಟ ಮಾಡುತ್ತಿದ್ದಾರೆ. ವ್ಯಾಪಾರದ ದೃಷ್ಟಿಯಿಂದ ಇತರ ರಾಜ್ಯದಿಂದ ಕೊಡಗಿಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗಿ ಕೊಡವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊಡವರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಕೊಡವ ವೇಲ್‌ಫೆರ್ ಅಸೋಸಿಯೇಷನ್ ಎಂಬ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇದರ ಮೂಲಕ ವ್ಯಾಪಾರ ನಡೆಸಲು ಪ್ರೋತ್ಸಾಹ ನೀಡುತ್ತಿದ್ದು, ಜನಾಂಗಬಾಂಧವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು