News Karnataka Kannada
Saturday, April 13 2024
Cricket
ಮಡಿಕೇರಿ

ಮೇ1, ಮಡಿಕೇರಿಯಲ್ಲಿ ಸೈಕ್ಲೋಥಾನ್ ಸೈಕಲ್ ಜಾಥಾ

Untitled 198
Photo Credit : News Kannada

ಮಡಿಕೇರಿ: ಗ್ರೀನ್ ಸಿಟಿ ಫೋರಂ, ನಗರಸಭೆ ಹಾಗೂ ಇಳೆ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮೇ 1 ರಂದು ಮಡಿಕೇರಿಯಲ್ಲಿ ಸೈಕ್ಲೋಥಾನ್ ಸೈಕಲ್ ಜಾಥಾ ನಡೆಯಲಿದೆ.

ಫೋರಂ ನ ಸ್ಥಾಪಕಾಧ್ಯಕ್ಷ ಚೆಯ್ಯಂಡ ಸತ್ಯ ಮಾತನಾಡಿ, ಅಂದು ಬೆಳಗ್ಗೆ 7 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಸೈಕಲ್ ಜಾಥಾಕ್ಕೆ ಗಣ್ಯರಿಂದ ಚಾಲನೆ ದೊರೆಯಲಿದೆ ಎಂದು ತಿಳಿಸಿದ್ದಾರೆ.

ನಂತರ ಜಾಥಾ ಜನರಲ್ ತಿಮ್ಮಯ್ಯ ವೃತ್ತ, ರಾಜಾಸೀಟು, ವಿಜಯ ವಿನಾಯಕ ದೇವಾಲಯ, ಎಸ್‌ಬಿಐ ಮಾರ್ಗದ ಮೂಲಕ ನಗರದ ಹಳೆ ಖಾಸಗಿ ಬಸ್ ನಿಲ್ದಾಣ ತಲುಪಲಿದೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ಲಾಸ್ಟಿಕ್ ಮುಕ್ತ ಗುರಿಯತ್ತ ನಮ್ಮ ಕೆಲಸವನ್ನು ಪುನಶ್ಚೇತನಗೊಳಿಸಬೇಕಾಗಿದೆ. ಆದ್ದರಿಂದ ಸಾರ್ವಜನಿಕರು ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಸಹಕರಿಸುವಂತೆ ಸತ್ಯ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 9535915916  ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು