News Karnataka Kannada
Monday, April 29 2024
ಮಡಿಕೇರಿ

ಅಕ್ರಮ ಮರಳು ಗಣಿಗಾರಿಕೆ : ಡಿಸಿಐಬಿ ದಾಳಿ

Latest News
Photo Credit :

ಮಡಿಕೇರಿ: ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೋಮವಾರ ದೊರೆತ ಖಚಿತ ಮಾಹಿತಿ ಹಿನ್ನೆಲೆ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಮರಳು ಗಣಿಗಾರಿಕೆಯನ್ನು ಪತ್ತೆ ಹಚ್ಚಿದ್ದಾರೆ.

ಮರಳು ತುಂಬಿದ ಒಂದು ಮಿನಿ ಟಿಪ್ಪರ್, ಹೊಳೆಯ ದಡದಲ್ಲಿ ಸಂಗ್ರಹಿಟ್ಟಿದ್ದ 2 ಲೋಡಿನಷ್ಟು ಮರಳು ಮತ್ತು ಒಂದು ಕಬ್ಬಿಣದ ತೆಪ್ಪವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಡಿಸಿಐಬಿ ಪಿ.ಐ. ಐ.ಪಿ.ಮೇದಪ್ಪ, ಮಡಿಕೇರಿ ಗ್ರಾಮಾಂತರ ಠಾಣೆಯ ಪಿ.ಐ. ರವಿಕಿರಣ್, ಡಿಸಿಐಬಿ ಎಎಸ್‍ಐ ಹಮೀದ್ ಸಿಬ್ಬಂದಿಗಳಾದ ನಿರಂಜನ್, ವೆಂಕಟೇಶ್, ವಸಂತ, ಯೋಗೇಶ್ ಕುಮಾರ್, ಶರತ್ ರೈ, ಸುರೇಶ್, ಅನಿಲ್ ಕುಮಾರ್, ಮಡಿಕೇರಿ ಗ್ರಾಮಾಂತರ ಠಾಣೆಯ ಕೆ.ಡಿ.ದಿನೇಶ್ ಚಾಲಕರಾದ ಶಶಿಕುಮಾರ್, ಅಭಿಷೇಕ್ ಹಾಗೂ ಪ್ರವೀಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು