News Karnataka Kannada
Tuesday, April 30 2024
ಮಡಿಕೇರಿ

 ಆಗಸ್ಟ್‌ 18 ರಂದು ಕೊಡಗಿಗೆ ಆಗಮಿಸಲಿರುವ ಸಂಸದ ರಾಜೀವ್‌ ಚಂದ್ರಶೇಖರ್‌

Rajeev Chandra Shekar
Photo Credit :

 

ಮಡಿಕೇರಿ : ಕೇಂದ್ರ ಸರ್ಕಾರದಲ್ಲಿ ಸ್ಥಾನ ಪಡೆದಿರುವ ಕರ್ನಾಟಕದ ನಾಲ್ವರು ಸಚಿವರು ರಾಜ್ಯಾದ್ಯಂತ ಜನಾಶೀರ್ವಾದ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಸಚಿವರುಗಳಾದ ಶೋಭಾಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ ಖೂಬ ಹಾಗೂ ನಾರಾಯಣಸ್ವಾಮಿ ಅವರುಗಳು ಪ್ರವಾಸ ಹಮ್ಮಿಕೊಂಡಿದ್ದಾರೆ. ಪ್ರತ್ಯೇಕ ತಂಡವಾಗಿ ಸಂಚರಿಸಲಿದ್ದು, ಆಗಸ್ಟ್ 18 ರಂದು ಕೊಡಗು ಜಿಲ್ಲೆಗೆ ರಾಜೀವ್ ಚಂದ್ರಶೇಖರ್ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಗುವುದೆಂದರು. ನಂತರ ಕೊಡಗಿನ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಸ್ವಾತಂತ್ರ್ತಯ ಹೋರಾಟಗಾರ ಅಪ್ಪಯ್ಯಗೌಡ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗಿಡನೆಡುವ ಕಾರ್ಯಕ್ರಮ ನಡೆಯಲಿದೆ ಎಂದರು.

ನಗರದ ಕ್ರಿಸ್ಟಲ್ ಕೋರ್ಟ್ ಹೋಟೆಲ್‌ ನಲ್ಲಿ  ಸಾರ್ವಜನಿಕರಿಂದ ಗೌರವ ಸ್ವೀಕರಿಸಲಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಆಯ್ದ ಕೃಷಿಕರು, ನಿವೃತ್ತ ಯೋಧರು ಹಾಗೂ ಹಿರಿಯರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಪುತ್ತೂರು ಶಾಸಕ ಸಂಜೀವ್ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರವಾಗಲಿದೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು