Categories: ಮಡಿಕೇರಿ

ಉಚಿತವಾಗಿ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕೊಡಗು ರೈತ ಸಂಘ ಮುಖ್ಯಮಂತ್ರಿಯವರಿಗೆ ಮನವಿ

ಮಡಿಕೇರಿ: ಕೊಡಗು ಜಿಲ್ಲೆಯ ರೈತರಿಗೆ 10 ಎಚ್.ಪಿ.ವರೆಗೆ ಉಚಿತವಾಗಿ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದು ಭೇಟಿ ಮಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಮತ್ತು ಪದಾಧಿಕಾರಿಗಳು ಜಿಲ್ಲೆಯ ರೈತರು ಅನುಭವಿಸುತ್ತಿರುವ ತೊಂದರೆ ಬಗ್ಗೆ ಗಮನ ಸೆಳೆದರು.

ರಾಜ್ಯದ ಹಲವಾರು ಜಿಲ್ಲೆಯಲ್ಲಿ ರೈತರಿಗೆ 10 ಎಚ್.ಪಿ. ವಿದ್ಯುತ್ ಉಚಿತವಾಗಿ ಲಭ್ಯವಾಗುತ್ತಿದೆ. ಆದರೆ ಕೊಡಗು ಜಿಲ್ಲೆಯ ರೈತರು ಇದರಿಂದ ವಂಚಿತರಾಗಿದ್ದಾರೆ. ರೈತ ಸಂಘವು ಹಲವು ಬಾರಿ ಈ ಬಗ್ಗೆ ಹೋರಾಟ ನಡೆಸಿ ಸರಕಾರದ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಬಾರಿಯ ಅಧಿವೇಶನದಲ್ಲಿ ರೈತರ ಹಲವು ವರ್ಷಗಳ ಬೇಡಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಮನು ಸೋಮಯ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕೊಡಗಿನ ರೈತರು ಹೆಚ್ಚಾಗಿ ಕಾಫಿ ಹಾಗೂ ಕರಿಮೆಣಸು ಬೆಳೆಯುತ್ತಾರೆ. ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಮಾತ್ರ ರೈತರು ಬೆಳೆಗಳಿಗೆ ನೀರನ್ನು ಬಳಕೆ ಮಾಡುತ್ತಾರೆ. ಉಳಿದ ಸಮಯದಲ್ಲಿ ನಮಗೆ ವಿದ್ಯುತ್ ಆವಶ್ಯಕತೆ ಇರುವುದಿಲ್ಲ, ಹೀಗಾಗಿ ಉಚಿತ ವಿದ್ಯುತ್ ನೀಡುವುದು ಸರಿಯಾದ ಕ್ರಮವಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳು ಸ್ಪಂದಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪದಾಧಿಕಾರಿಗಳಾದ ಆಲೆಮಾಡ ಮಂಜುನಾಥ್, ರಾಯ್ ಮಾದಪ್ಪ, ತೀತರಮಾಡ ರಾಜ, ಮಂಡೇಪಂಡ ಪ್ರವೀಣ್ ಮುಂತಾದವರಿದ್ದರು.

Sneha Gowda

Recent Posts

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

10 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

25 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

42 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

55 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

2 hours ago