Categories: ಮಡಿಕೇರಿ

‘ಕನ್ನಡಕ್ಕಾಗಿ ನಾವು’ ಅಭಿಯಾನ: ಅ.28 ರಂದು ಸಾಮೂಹಿಕ ಗಾಯನ ಕಾರ್ಯಕ್ರಮ

ಕೊಡಗು: ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರ ಆಶಯದಂತೆ 2021ನೇ ಸಾಲಿನ ರಾಜ್ಯೋತ್ಸವವನ್ನು ‘ಕನ್ನಡಕ್ಕಾಗಿ ನಾವು’ ಎಂಬ ಶೀರ್ಷಿಕೆಯಡಿ ಅಭಿಯಾನವಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಇದರ ಅಂಗವಾಗಿ ರಾಜ್ಯಾದ್ಯಂತ ಕನ್ನಡದ ಶ್ರೇಷ್ಠತೆಯನ್ನು ಸಾರುವ ಕುವೆಂಪುರವರ ‘ಬಾರಿಸು ಕನ್ನಡ ಡಿಂಡಿಮವ’ ಡಾ. ಕೆ.ಎಸ್.ನಿಸಾರ್ ಅಹಮ್ಮದ್ ರವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖರವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಈ ಮೂರು ಹಾಡುಗಳನ್ನು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಹಾಡಲು ವ್ಯವಸ್ಥೆಗೊಳಿಸಲಾಗಿದೆ.

ಅದರಂತೆ, ಅ.28 ರಂದು ಬೆಳಿಗ್ಗೆ 11 ಗಂಟೆಗೆ ಸಾಮೂಹಿಕ ಗಾಯನವನ್ನು ನಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಕನ್ನಡ ಪರ ಸಂಘ ಸಂಸ್ಥೆಯ ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಬಹುದಾಗಿದೆ.

ಇದರೊಂದಿಗೆ ಜಿಲ್ಲಾದ್ಯಾಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ನಡೆಸಲು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಮನವಿ ಮಾಡಿದ್ದಾರೆ.

Sneha Gowda

Recent Posts

ನಿಜಶರಣೆಯ ಮಾದರಿ ಬದುಕು: ಎಡೆಯೂರು ಶ್ರೀಗಳು

ಗುರು ಲಿಂಗ ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು…

2 mins ago

ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

ಗ್ರಾಮದಲ್ಲಿ ಶಾಂತಿಯುತ ವಾತಾವರಣ ಕದಡುವ ಮೂಲಕ ಗ್ರಾಮಸ್ಥರ ನೆಮ್ಮದಿಗೆ ಧಕ್ಕೆ ತಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿ.ಕಾರೇಹಳ್ಳಿ…

3 mins ago

ರಸ್ತೆಗಳ ಗುಂಡಿ ಮುಚ್ಚಿಸಲು ಬಹುಜನ ಸಮಾಜ ಪಕ್ಷದಿಂದ ಮನವಿ

ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿ-ಗೊಟರುಗಳಿಗೆ ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು…

9 mins ago

ಸಿಹಿ ತಿಂಡಿ ವಿಚಾರಕ್ಕೆ ಮುರಿದು ಬಿದ್ದ ಮದುವೆ

ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಬೇಡ ಎಂದು ಗಲಾಟೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ…

12 mins ago

ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ

ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ…

18 mins ago

ಲವ್‌ ಮ್ಯಾರೇಜ್‌ ಆದ್ರೂ ಗಂಡನ ಖಾಸಗಿ ಭಾಗ ಸುಟ್ಟು ಕಾಟ ಕೊಡ್ತಿದ್ದ ಪತ್ನಿ !

ಮುಸ್ಲಿಂ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿ, ಆತನ ಖಾಸಗಿ ಭಾಗಗಳಿಗೆ ಹಾನಿ ಮಾಡಿದ್ದಾಳೆ. ಪತಿಯನ್ನು ಬೆತ್ತಲೆ ಮಾಡಿ, ಮಂಚದ…

18 mins ago