ಮಡಿಕೇರಿ

ಕಿಮ್ಸ್ ಕಾಲೇಜಿನ 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ

ಮಡಿಕೇರಿ :  ಕೊಡಗು ವೈದ್ಯಕೀಯ ಕಾಲೇಜಿ(ಕಿಮ್ಸ್ )ನ ಸುಮಾರು 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕಾಲೇಜಿನ ಡೀನ್‌ ಡಾ.ಕಾರ್ಯಪ್ಪ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ.

ವಾರದ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಆದ ಕಾರಣ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ತಪಾಸಣೆ ನಡೆಸಲಾಗಿದೆ. ಈ ಸಂದರ್ಭ 34 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ಸಂಪರ್ಕಿತ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್‌ ಪರೀಕ್ಷೆಗೊಳಪಡಿಸಲಾಗಿದೆ. ಸೋಂಕಿತರಿಗೆ ಕಾಲೇಜಿನಲ್ಲಿಯೇ ಐಸೋಲೇಷನ್‌ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್‌ಲೈನ್‌ ಮೂಲಕ ತರಗತಿ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಡಾ.ಕಾರ್ಯಪ್ಪ ತಿಳಿಸಿದ್ದಾರೆ.

Sneha Gowda

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

15 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

42 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

51 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago