Categories: ಮಡಿಕೇರಿ

ಕುಂದುರುಮೊಟ್ಟೆ ಮಾರಿಯಮ್ಮನ ಅದ್ಧೂರಿ  ವಾರ್ಷಿಕೋತ್ಸವ

ಮಡಿಕೇರಿ: ಮಡಿಕೇರಿ ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾಗಿರುವ ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 132ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.

ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮೂರು ದಿನಗಳಕಾಲ ವಿವಿಧ ಪೂಜಾಕೈಂಕರ್ಯಗಳು ನೆರವೇರಿದವು. ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಿತು.

ಮನೆ ಮನೆಯಿಂದ ದೇವಾಲಯಕ್ಕೆ ಪೂಜೆಯನ್ನು ತಂದೊಪ್ಪಿಸಲಾಯಿತು. ಅಲ್ಲದೆ ಮನೆ – ಮನೆಯಿಂದ ದೇವಾಲಯಕ್ಕೆ ಆರತಿ ತಂದು ದೇವಿಗೆ ಮಹಾ ಮಂಗಳಾರತಿ ನೆರವೇರಿತು.

ನಂತರ ಹೂವಿನ ವರ ಬೇಡುವುದು ಮತ್ತು ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಶ್ರೀ ದೇವಿಗೆ ಭಕ್ತಾಧಿಗಳು ಹರಕೆ ಮತ್ತು ಕಾಣಿಕೆ  ಒಪ್ಪಿಸಿಸಿದರು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ದೇವಿಗೆ ಹರಕೆ ಒಪ್ಪಿಸಲು, ಪೂಜೆ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago