News Karnataka Kannada
Monday, April 29 2024
ಮಡಿಕೇರಿ

ಕೆಯುಡಬ್ಲ್ಯುಜೆ ಚುನಾವಣೆ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ

High Court
Photo Credit :

ಮಡಿಕೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಯುಜೆ)ದ ಆಡಳಿತ ಮಂಡಳಿ ಹಾಗೂ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ( 27 ) ಚುನಾವಣೆ ನಡೆಯಲಿದೆ. ಆದರೆ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಕೊಡಗು ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಘಟಕಗಳ ಆಡಳಿತ ಮಂಡಳಿಗಳಿಗೂ ಭಾನುವಾರ ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಚುನಾವಣಾ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿರುವುದು ಸ್ಪರ್ಧಿಗಳಲ್ಲಿ ತಳಮಳ ಉಂಟು ಮಾಡಿದೆ.

ಸಂಘದ ಚುನಾವಣಾ ಪ್ರಕ್ರಿಯೆಯಲ್ಲಿ ಕೆಲವು ನ್ಯೂನ್ಯತೆಗಳಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸಂಘದ ಹಾಲಿ ಕಾರ್ಯದರ್ಶಿಯಾಗಿರುವ ಮಲ್ಲಿಕಾರ್ಜುನ ಬಂಗ್ಲೆ ಹಾಗೂ ಇತರರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈಗಾಗಲೇ ರಾಜ್ಯ ಸಂಘಕ್ಕೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ ಜಿ.ಸಿ. ಲೋಕೇಶ್, ರಾಜ್ಯ ಕಾರ್ಮಿಕ ಆಯುಕ್ತರು ಮತ್ತಿತರ ಅಧಿಕಾರಿಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ.

ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಅವರು, ಚುನಾವಣೆ ನಡೆದರೂ ಕೂಡಾ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಇಡೀ ರಾಜ್ಯದ ಚುನಾವಣಾ ಫಲಿತಾಂಶವನ್ನು ಮುಂದಿನ ಪ್ರಕಟಿಸದಂತೆ ತಡೆಯಾಜ್ಞೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು