Categories: ಮಡಿಕೇರಿ

ಕೊಡಗಿನಲ್ಲಿ ಲಾಟರಿ-ಮಟ್ಕಾ ತಡೆಗೆ ಕಠಿಣ ಕ್ರಮ

ಮಡಿಕೇರಿ: ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡಿದ್ದರೂ ಜಿಲ್ಲೆಯಲ್ಲಿ ಅಕ್ರಮವಾಗಿ ಲಾಟರಿ ಟಿಕೆಟ್ ಮಾರಾಟ  ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆಗೊಮ್ಮೆ ಈಗೊಮ್ಮೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದರೂ ಉಳಿದಂತೆ ಗುಟ್ಟಾಗಿ ನಡೆಯುತ್ತಲೇ ಇದೆ.

ಇದನ್ನು ಜಿಲ್ಲೆಯಲ್ಲಿ ಬೇರು ಸಹಿತ ಕಿತ್ತು ಹಾಕುವ ಸಲುವಾಗಿ ಜತೆಗೆ ಮಟ್ಕಾ ಹಾವಳಿಯನ್ನು ತಡೆಗಟ್ಟುವ ಸಲುವಾಗಿ ಲಾಟರಿ ಫೈಯಿಂಗ್ ಸ್ಕ್ವಾಡ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕಚೇರಿಯಲ್ಲಿ ಲಾಟರಿ ಫೈಯಿಂಗ್ ಸ್ಕ್ವಾಡ್‌ನ ಸಭೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆಯ ಸಹಾಯಕ ನಿರ್ದೇಶಕರಾದ ಸುಜಾತ, ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಕೇಶವ ಮೂರ್ತಿ, ಅಭಿವೃದ್ಧಿ ಅಧಿಕಾರಿ ಎಂ.ಪಿ.ಪ್ರಸನ್ನ ಹಾಜರಿದ್ದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಗಳು ನಡೆಯುವುದನ್ನು ನಿಷೇಧಿಸಲಾಗಿದ್ದು, ಇಂತಹ ಚಟುವಟಿಕೆಗಳು ಕಂಡುಬಂದಲ್ಲಿ ಅಂತವರ ವಿರುದ್ದ ಲಾಟರಿ ರೆಗ್ಯುಲೇಷನ್ ಆಕ್ಟ್ 1998 ರಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.

ಅಕ್ರಮ ಲಾಟರಿ ಮಾರಾಟ ಮತ್ತು ಖರೀದಿ ಮಾಡುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದ್ದು ಯಾವುದೇ ಅಕ್ರಮಗಳಿಗೆ ಸಾರ್ವಜನಿಕರು ಉತ್ತೇಜನ ನೀಡಬಾರದು.

ಅಕ್ರಮ ಲಾಟರಿ ಮಾರಾಟ ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಅಥವಾ ಲಾಟರಿ ಫೈಯಿಂಗ್ ಸ್ಕ್ವಾಡ್‌ನ ದೂ.ಸಂ. 08272-228678 ಗೆ ದೂರು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Sneha Gowda

Recent Posts

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

12 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

37 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

56 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago