ಕೊಡಗು: ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಿರುವ ಸರಕಾರ, ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ್ ಅವರನ್ನು ಕೊಡಗು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ರಾಯಚೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಸತೀಶ್ ಅವರನ್ನು ಕೇವಲ ಎರಡು ತಿಂಗಳು 17 ದಿನಗಳಲ್ಲಿ ವರ್ಗಾವಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ್ ಅವರು ಸರಳತೆ ಹಾಗೂ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದರೆಂದು ಮೂಲಗಳು ತಿಳಿಸಿದ್ದು, ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಚುರುಕುಗೊಳಿಸುವಲ್ಲಿ ಶ್ರಮಿಸಿದ್ದರೆನ್ನಲಾಗಿದೆ