ಮಡಿಕೇರಿ: ಕೊಡಗು ಜಿಲ್ಲಾ ಸಿಇಎನ್ ಅಪರಾಧ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಎಟಿಎಂ/ಡೆಬಿಟ್ ಕಾರ್ಡ್ ವಂಚನೆಯ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಬೆಲಸಿಂದ ಗ್ರಾಮದ ನಿವಾಸಿ ಕಿರಣ್ ಕುಮಾರ್ ಬಂಧಿತ ಆರೋಪಿ. ಈತನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 58 ಗ್ರಾಂ ಚಿನ್ನಾಭರಣ ಹಾಗೂ 294 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಶ್ಲಾಘಿಸಿದ್ದಾರೆ.