ಕೊಡಗು: ಜಿಲ್ಲೆಯಲ್ಲಿ ಸೋಮವಾರ 17ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಸೋಮವಾರ ಪಾಸಿಟಿವಿಟಿ ದರ ಶೇ.2.60ರಷ್ಟಿತ್ತು. ಮಡಿಕೇರಿ ತಾಲೂಕಿನಲ್ಲಿ 2 ಸೋಮವಾರಪೇಟೆ ತಾಲೂಕಿನಲ್ಲಿ 11ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 4 ಪ್ರಕರಣಗಳು ದೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 34,811ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 92 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 33,812ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ 574 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 425 ಮಂದಿ ಸಾವಿಗೀಡಾಗಿದ್ದಾರೆ. 55 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ.2.60ರಷ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.