News Karnataka Kannada
Tuesday, May 07 2024
ಮಡಿಕೇರಿ

ಕೊಡಗು: ಕೋವಿಡ್ ನಿಯಮಾವಳಿಗೆ ಒಳಪಟ್ಟು ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ

Kota Shrinivasa Poojari
Photo Credit :

ಕೊಡಗು: ಕೊಡಗಿನ ಪುಣ್ಯಕ್ಷೇತ್ರ ಭಾಗಮಂಡಲದಲ್ಲಿ ಕೋವಿಡ್ ನಿಯಮಾವಳಿಗೆ ಒಳಪಟ್ಟು ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ಶಾಸಕ ಎಂ.ಪಿ.ಅಪಚ್ಚುರಂಜನ್ ಅವರು ಮಾತನಾಡಿ ಕೋವಿಡ್ ನಿಯಮಗಳನ್ನು ಅನುಸರಿಸಿ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ ಮಾಡಬೇಕು ಎಂದು ವಿಷಯ ಪ್ರಸ್ತಾಪಿಸಿದರು.

ಇದಕ್ಕೆ ಧ್ವನಿಗೂಡಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು, ಪ್ರತಿನಿತ್ಯ 10 ರಿಂದ 15 ಕುಟುಂಬಗಳು ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಆಗಮಿಸಲಿದ್ದು, ಈ ಕಾರ್ಯಕ್ಕೆ ಅವಕಾಶ ಮಾಡಬೇಕು. ಸ್ಥಳೀಯರಿಗೆ ಪೂಜಾ ಕಾರ್ಯದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಾತನಾಡಿ ಪಿಂಡ ಪ್ರದಾನ ಹಾಗೂ ಶಾಂತಿ ಪೂಜೆಗೆ ಅವಕಾಶ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭ ಕೋವಿಡ್ ನಿಯಮಾವಳಿಗೆ ಒಳಪಟ್ಟು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪಿಂಡ ಪ್ರದಾನ ಮತ್ತು ಶಾಂತಿ ಪೂಜೆಗೆ ಅವಕಾಶ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ರೆಸಾರ್ಟ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಇದ್ದರೆ ರೆಸಾರ್ಟ್ ಕೂಡ ಒಂದು ವಾರ ಬಂದ್ ಮಾಡಲು ಸಚಿವರು ಆದೇಶಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು