ಕೊಡಗು : ಕೊಡಗು ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 10 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ತಲಾ 4 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 2 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 35,090ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 8 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಇದುವರೆಗೆ ಒಟ್ಟು 34,368ಮಂದಿ ಗುಣಮುಖರಾದಂತಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 296 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 426 ಮಂದಿ ಸಾವಿಗೀಡಾಗಿದ್ದಾರೆ. 34 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ.0.25ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.