Categories: ಮಡಿಕೇರಿ

ಕೊಡಗು : ಕೋವಿ ವಿವಾದದ ವಿಚಾರಣೆ

ಮಡಿಕೇರಿ  : ಕೊಡವ ಸಮುದಾಯ ಮತ್ತು ಕೊಡಗಿನ ಜಮ್ಮಾ ಹಿಡುವಳಿದಾರರು ಬಂದೂಕು ವಿನಾಯಿತಿ ಹಕ್ಕು ಹೊಂದುವ ಕುರಿತು ಹೈ ಕೋರ್ಟಿನಲ್ಲಿ    ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಮಂಗಳವಾರ ವಿಚಾರಣೆ ನಡೆಸಲಾಯಿತು.
ಹೈ ಕೋರ್ಟ್ ಹಿರಿಯ ನ್ಯಾಯಾಧೀಶರುಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಸಚಿನ್ ಮಗ್ಗುಂ ಅವರ ವಿಭಾಗೀಯ ಪೀಠ ಎದುರು ಬಂದ ಅರ್ಜಿಯನ್ನು ಪರಿಶೀಲನೆ ನಡೆಸಿದ ನ್ಯಾಯಾಲಯ ಈ ವಿಚಾರಣೆಯಲ್ಲಿ ಫೆಡರೇಷನ್ ಆಫ್ ಕೊಡವ ಸಮಾಜ(ಬಾಳುಗೋಡು), ಕೊಡವ ನ್ಯಾಷನಲ್ ಕೌನ್ಸಿಲ್ ಮತ್ತು ಕೊಡವ ಸಮಾಜ ಬೆಂಗಳೂರು ದಾಖಲಿಸಿದ ಅರ್ಜಿಗಳನ್ನು ಪುರಸ್ಕರಿಸಿ ಇವರುಗಳನ್ನೂ ಕೂಡ ಪ್ರತಿವಾದಿಗಳನ್ನಾಗಿ ಪರಿಗಣಿಸಲು ನ್ಯಾಯಾಲಯ ಆದೇಶ ಮಾಡಿದೆ.
ಮಾತ್ರವಲ್ಲದೇ ಬಂದೂಕು ವಿಚಾರದ ಕುರಿತು ಈ ಸಂಸ್ಥೆಗಳಿಗೆ ಏನೇ ಆಕ್ಷೇಪಣೆಗಳು ಇದ್ದರೂ ಅದನ್ನು ಲಿಖಿತ ರೂಪದಲ್ಲಿ ಸಲ್ಲಿಸಲು ಎರಡು ವಾರಗಳ ಕಾಲಾವಕಾಶವನ್ನು ನ್ಯಾಯಾಲಯ ನೀಡಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೂ ಕೂಡ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಎರಡುವಾರಗಳ ಸಮಯ ಕೊಡಲಾಗಿದೆ. ತದನಂತರ ಪ್ರಕರಣದ ವಿಚಾರಣೆಯನ್ನು ಆಗಸ್ಟ್.31ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.
ಈ ರಿಟ್ ಅರ್ಜಿಯ ವಿರುದ್ಧ ಆಕ್ಷೇಪಣೆಗಳನ್ನು ಶೀಘ್ರದಲ್ಲೇ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಫೆಡರೇಷನ್ ಆಫ್ ಕೊಡವ ಸಮಾಜ, ಕೊಡವ ನ್ಯಾಷನಲ್ ಕೌನ್ಸಿಲ್ ಪರ ವಕಾಲತು ವಹಿಸಿದ್ದ ಹಿರಿಯ ವಕೀಲರಾದ ಎ.ಎಸ್.ಪೊನ್ನಣ್ಣ ಹಾಗೂ ಕೊಡವ ಸಮಾಜ ಬೆಂಗಳೂರು ಪರವಾಗಿದ್ದ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ಅಡಿಷನಲ್ ಸಾಲಿಸಿಟರ್ ಜನರಲ್ ನರಗುಂದ ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು.

Indresh KC

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

10 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago