ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ 34 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 3, ಸೋಮವಾಪೇಟೆ ತಾಲೂಕಿನಲ್ಲಿ 13 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 18 ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 34917ರಷ್ಟಾಗಿದೆ.
ಕಳೆದ 24ಗಂಟೆಗಳಲ್ಲಿ 58 ಗುಣಮುಖರಾಗಿದ್ದು, ಇದುವರೆಗೆ ಒಟ್ಟು 34,038 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಪ್ರಸಕ್ತ ಜಿಲ್ಲೆಯಲ್ಲಿ 454 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 425 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 57 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ.0.90%ರಷ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.