ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ 45 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 12, ಸೋಮವಾರಪೇಟೆ ತಾಲೂಕಿನಲ್ಲಿ 15 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 18ಹೊಸ ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,413ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 71 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ಮುಕ್ತರಾದವರ ಸಂಖ್ಯೆ 46,146ರಷ್ಟಾಗಿದ್ದು, ಸಾವಿವೀಡಾದವರ ಸಂಖ್ಯೆ 447ಕ್ಕೆ ಏರಿಕೆಯಾಗಿದೆ.
ಪ್ರಸಕ್ತ ಜಿಲ್ಲೆಯಲ್ಲಿ820 ಸಕ್ರಿಯ ಪ್ರಕರಣಗಳಿದ್ದು, 104 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.3.02ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.