ಕೊಡಗು: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 12 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ತಲಾ 5 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ35,063ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 12ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 34,306ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ.
ಪ್ರಸಕ್ತ ಜಿಲ್ಲೆಯಲ್ಲಿ 331 ಸಕ್ರಿಯ ಪ್ರಕರಣಗಳಿದ್ದು,ಇದುವರೆಗೆ 426ಮಂದಿ ಸಾವಿಗೀಡಾಗಿದ್ದಾರೆ.50ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ. 0.35ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.