ಮಡಿಕೇರಿ: ಕೊಡಗು ಜಿಲ್ಲೆಯ ಖಾಸಗಿ ಶಾಲೆಯಲ್ಲಿ 26 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ. ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಕೊಡಗಿನ ಕುಶಾಲನಗರದಲ್ಲಿರುವ ಜ್ಞಾನಗಂಗಾ ವಸತಿ ಶಾಲೆಯ 26 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಸತಿ ಶಾಲೆಯಲ್ಲಿ 600ಕ್ಕೂ ಹೆಚ್ಚು ಮಕ್ಕಳಿದ್ದು, 385 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ 26 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಎಲ್ಲಾ ವಿದ್ಯಾರ್ಥಿಗಳು ಆರೋಗ್ಯದಿಂದ ಇದ್ದಾರೆ ಎಂದು ತಿಳಿಸಿದ್ದಾರೆ.