ಮಡಿಕೇರಿ

ಕೊಡಗು : ಬೆಳೆ ಹಾನಿಯ ಮರು‌ ಸಮೀಕ್ಷೆ ನಡೆಸಲು ಸಚಿವ ಶ್ರೀನಿವಾಸ ಪೂಜಾರಿ ಸೂಚನೆ

ಕೊಡಗು: ಜಿಲ್ಲೆಯಲ್ಲಿ ಕಾಫಿ, ಕರಿಮೆಣಸು, ಅಡಿಕೆ ಮತ್ತಿತರ ಬೆಳೆಗಳಿಗೆ ಉಂಟಾದ ಹಾನಿಯ ಬಗ್ಗೆ ನಡೆದಿರುವ ಸಮೀಕ್ಷೆ ಅಸಮರ್ಪಕವಾಗಿರುವುದಾಗಿ ದೂರುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಹಾನಿ ಸಂಬಂಧ ಮರು ಸಮೀಕ್ಷೆ ಮಾಡಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ನಡೆದ ಸಭೆಯಲ್ಲಿ ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಮಾಹಿತಿ ಪಡೆದ ಸಚಿವರು, ಮನೆ, ಬೆಳೆ ಹಾನಿಗೆ ಪರಿಹಾರ, ಜಾನುವಾರು ಹಾಗೂ ಮಾನವ ಪ್ರಾಣ ಹಾನಿಗೆ ಪರಿಹಾರ ವಿತರಿಸಲಾಗಿದೆಯೇ ಎಂದು ಪ್ರಶ್ನಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ ಅವರು, ಟಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಹೈಸೊಡ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಕಾಫಿ ಬೆಳೆ ಸಮೀಕ್ಷೆಯನ್ನು ಕೈಬಿಟ್ಟಿರುವುದು ಏಕೆ ಎಂದು ಪ್ರಶ್ನಿಸಿದರು. ಅಲ್ಲದೆ ಸಮೀಕ್ಷೆ ಮಾಡಿ ಸೇರ್ಪಡೆ ಮಾಡುವಂತೆ ಶಾಸಕರು ಸೂಚಿಸಿದರು. ಹಾಗೆಯೇ ಸಂಪಾಜೆ, ಪೆರಾಜೆ, ಚೆಂಬು, ಕರಿಕೆ ಭಾಗದಲ್ಲಿ ಧಾರಾಕಾರ ಮಳೆಯಿಂದ ಅಡಿಕೆ ಬೆಳೆಗೆ ಹಾನಿಯಾಗಿದ್ದು, ಸರ್ವೆ ಮಾಡಿ ಬೆಳೆ ಹಾನಿಯ ಮಾಹಿತಿ ಒದಗಿಸುವಂತೆ ಸೂಚಿಸಿದರು.

ಈ ಕುರಿತು ಧ್ವನಿ ಗೂಡಿಸಿದ ಎಂ.ಪಿ.ಅಪ್ಪಚ್ಚುರಂಜನ್ ಅವರು ಗರ್ವಾಲೆ, ಮುಟ್ಲು, ಶಾಂತಳ್ಳಿ, ಮಕ್ಕಂದೂರು, ಗಾಳಿಬೀಡು ವ್ಯಾಪ್ತಿಯಲ್ಲಿ ಕಳೆದ ವಾರ ವ್ಯಾಪಕ ಮಳೆಯಾಗಿದ್ದು, ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡುವಂತೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಾತನಾಡಿ, ಕಳೆದ ನಾಲ್ಕು ವರ್ಷದಿಂದ ರೈತರು ಒಂದಲ್ಲ ಒಂದು ರೀತಿಯ ಪ್ರಾಕೃತಿಕ ವಿಕೋಪದಿಂದ ತೊಂದರೆಗೆ ಸಿಲುಕುತ್ತಿದ್ದಾರೆ.ಈ ಬಾರಿಯೂ ಸಹ ಬೆಳೆ ಹಾನಿಯಾಗಿದ್ದು, ಆದ್ದರಿಂದ ಸೂಕ್ತ ಪರಿಹಾರ ದೊರೆಯಬೇಕು ಎಂದು ಒತ್ತಾಯಿಸಿದರು. ಕಾಫಿ, ಅಡಿಕೆ, ಕರಿಮೆಣಸು ಬೆಳೆ ಸಂಬಂಧಿಸಿದಂತೆ ಮರು ಸಮೀಕ್ಷೆ ಆಗಬೇಕು ಎಂದರು.

ಮೈಸೂರು ಮತ್ತು ಹಾಸನ ಜಿಲ್ಲೆಯಿಂದ ಕೊಡಗಿಗೆ ತಲಾ 1500 ಟನ್ ರಸಗೊಬ್ಬರ ಪೂರೈಕೆಯಾಗಬೇಕಿದ್ದು, ಜಿಲ್ಲೆಯ ಸಹಕಾರ ಸಂಘಗಳಲ್ಲಿ ಬೇಡಿಕೆ ಇರುವ ರಸಗೊಬ್ಬರವನ್ನು ತರಿಸಿಕೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಅಪ್ಪಚ್ಚು ರಂಜನ್ ಸೂಚಿಸಿದರು.

 

 

 

Sneha Gowda

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

4 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

4 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

4 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

5 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

5 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

5 hours ago