Categories: ಮಡಿಕೇರಿ

ಕೊಡಗು : ವಾರಾಂತ್ಯ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ಮುಂದುವರಿಕೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್ ಡೌನ್ ನ್ನು ರದ್ದುಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. ಆದರೆ ವಾರದ ಎಲ್ಲಾ ದಿನಗಳಂದು ರಾತ್ರಿ ಕಫ್ರ್ಯೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನೂತನ‌ ಆದೇಶದನ್ವಯ ಕಂಟೈನ್ಮೆಂಟ್ ವಲಯಗಳಲ್ಲಿ ಯಾವುದೇ ಚಟುವಟಿಕೆಳಿಗೆ ಅವಕಾಶ ಇರುವುದಿಲ್ಲ. ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ತರಹದ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯ ಗಡಿಭಾಗಗಳಲ್ಲಿ ಮತ್ತು ಚೆಕ್ ಪೋಸ್ಟ್ ಗಳಲ್ಲಿ ನಡೆಸುತ್ತಿರುವ ಸರ್ವೇಕ್ಷಣಾ ಕ್ರಮಗಳು/ ನಿರ್ಬಂಧಗಳು ಯಥಾವತ್ತಾಗಿ ಮುಂದುವರೆಯುತ್ತದೆ ಎಂದೂ ಅವರು ಹೇಳಿದ್ದಾರೆ.
ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆಗಳಾದ ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

Sneha Gowda

Recent Posts

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

4 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

7 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

20 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

29 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

33 mins ago