ಕೊಡಗು: ಜಿಲ್ಲೆಯಲ್ಲಿ ಭಾನುವಾರ ಪೂರ್ವಾಹ್ನ 11 ಗಂಟೆಗೆ ಕೊನೆಗೊಂಡಂತೆ ಕಳೆದ 24ಗಂಟೆಗಳಲ್ಲಿ ನಾಲ್ಕು ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ.
ಕಳೆದ 24ಗಂಟೆಯಲ್ಲಿ ವೀರಾಜಪೇಟೆ ತಾಲೂಕಿನಲ್ಲಿ ನಾಲ್ಕು ಹೊಸ ಕೋವಿಡ್ ಪ್ರಕರಣ ಕಂಡುಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 35,340ರಷ್ಟಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ನಾಲ್ಕು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದರೊಂದಿಗೆ ಇದುವರೆಗೆ ಒಟ್ಟು 34,813 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಒಟ್ಟು 430 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 97 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ಮೆಂಟ್ ವಲಯಗಳ ಸಂಖ್ಯೆ 23 ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.0.12 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.