ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 6 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ಒಂದು, ಸೋಮವಾರಪೇಟೆ ತಾಲೂಕಿನಲ್ಲಿ 3 ಹಾಗೂ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 2ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 35,080ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 52 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಇದುವರೆಗೆ ಒಟ್ಟು 34,360ಮಂದಿ ಗುಣಮುಖರಾದಂತಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 294 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 426 ಮಂದಿ ಸಾವಿಗೀಡಾಗಿದ್ದಾರೆ. 39 ಕಂಟೈನ್ ಮೆಂಟ್ ವಲಯಗಳಿದ್ದು,ಪಾಸಿಟಿವಿಟಿ ಪ್ರಮಾಣ ಶೇ.0.18ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.