Categories: ಮಡಿಕೇರಿ

ಗಡಿಭಾಗದ ಜಿಲ್ಲೆಗಳಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿ: ಡಾ.ಕೆ.ಸುಧಾಕರ್

ಮಡಿಕೇರಿ: ಗಡಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಕೆ.ಸುಧಾಕರ್ ಅವರು ನಿರ್ದೇಶನ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಅವರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ದೇಶದಾದ್ಯಂತ ಕೋವಿಡ್ ಮೂರನೇ ಅಲೆಯು ಅಕ್ಟೋಬರ್ ತಿಂಗಳಲ್ಲಿ ಸಂಭವಿಸುವ ಸಾಧ್ಯತೆ ಇದ್ದು, ಪ್ರಮುಖವಾಗಿ ಗಡಿ ಜಿಲ್ಲೆಗಳು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಆದೇಶದಂತೆ ನೆರೆ ರಾಜ್ಯದ ಗಡಿ ಭಾಗಗಳಿಗೆ ಸೇರಿ 20 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಸುಮಾರು 30 ಹಳ್ಳಿಗಳಲ್ಲಿ 39 ಸಾವಿರ ಜನರಿಗೆ ಸ್ವಯಂ ಪ್ರೇರಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮೊದಲ ಹಂತದ ಲಸಿಕೆಯನ್ನು ಶೇ.82 ರಷ್ಟು ಪೂರ್ಣಗೊಳಿಸಲಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಶೇ.100 ರಷ್ಟು ಸಾಧನೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಕರಣಗಳು ಶೇ.1.97 ಇದೆ. ಅದರ ಬಗ್ಗೆ ಶೀಘ್ರ ಕ್ರಮ ಕೈಗೊಂಡು ರ್ಯಾಟ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದ ಲಸಿಕೆ ಗುರಿಯನ್ನು ಹೊಂದಲಾಗಿದೆ. ಅದರಂತೆಯೇ ಹೆಚ್ಚು ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಪ್ರದೇಶಗಳನ್ನು ಕಂಟೈನ್‍ಮೆಂಟ್ ವಲಯಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಸಂಪರ್ಕ ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸಚಿವರ ಗಮನಕ್ಕೆ ತಂದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿಎಚ್‍ಒ ಡಾ.ವೆಂಕಟೇಶ್, ಡಾ.ಗೋಪಿನಾಥ್, ಡಾ.ಆನಂದ್, ಇತರರು ಇದ್ದರು.

Sneha Gowda

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

10 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

28 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

36 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

55 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago