Categories: ಮಡಿಕೇರಿ

ದೇವಟ್‌ ಪರಂಬನ್ನು ಹತ್ಯಾಕಾಂಡ ಸ್ಮರಣೆ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯ

ಮಡಿಕೇರಿ: ಟಿಪ್ಪು ಮತ್ತು ಫ್ರೆಂಚ್ ದಾಳಿಕೋರರು ಕೊಡವರನ್ನು ಹತ್ಯೆಗೀಡು ಮಾಡಿದ ಪ್ರದೇಶವಾದ ದೇವಟ್ ಪರಂಬನ್ನು ಅಂತರಾಷ್ಟ್ರೀಯ ಹತ್ಯಾಕಾಂಡದ ಸ್ಮರಣೀಯ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.

ಜಿಲ್ಲೆಯ ದೇವಟ್ ಪರಂಬುನಲ್ಲಿ ಟಿಪ್ಪು ಮತ್ತು ಫ್ರೆಂಚ್ ದಾಳಿಕೋರರಿಂದ ಹತ್ಯೆಗೀಡಾದ ಕೊಡವರಿಗೆ ಶ್ರದ್ಧಾಂಜಲಿ ಅರ್ಪಿಸುವ ಮಾಸಿಕ ಕಾರ್ಯಕ್ರಮದಲ್ಲಿ ಮಡಿದ ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಪ್ರಾರ್ಥಿಸಿ ಮಾತನಾಡಿದ ಅವರು, ನರಮೇಧ ಘಟನೆಯನ್ನು ಅಂತರರಾಷ್ಟ್ರೀಯ ಹತ್ಯಾಕಾಂಡದ ಸ್ಮರಣೆಯ ಪಟ್ಟಿಯಲ್ಲಿ ಸೇರಿಸಬೇಕೆಂದರು.

ಟಿಪ್ಪು ನಡೆಸಿದ 32ಕ್ಕೂ ಹೆಚ್ಚು ಆಕ್ರಮಣವನ್ನು ವಿಫಲಗೊಳಿಸಿದ ಕೊಡವರು ರಾಜ್ಯವನ್ನು ರಕ್ಷಿಸಿದರು. ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ ಟಿಪ್ಪು ಬುಡಕಟ್ಟು ಕೊಡವರನ್ನು ಹತ್ಯೆ ಮಾಡಿದನು. ಇದೊಂದು ಹೇಯ ಕೃತ್ಯವಾಗಿದ್ದು, ಕೊಡವ ಜನಾಂಗಕ್ಕೆ ಮಾಡಿದ ಘೋರ ಅನ್ಯಾಯವಾಗಿದೆ ಎಂದು ವಿವರಿಸಿದ ಅವರು ಈ ಘಟನೆಯ ಸ್ಮರಣೆಗಾಗಿ ದೇವಟ್‌ಪರಂಬುವಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸ್ಮರಣೆಯ ಪಟ್ಟಿಯಲ್ಲಿ ಸೇರಿಸುವುದರೊಂದಿಗೆ ಸ್ಮಾರಕ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಕೊಡವ ಬುಡಕಟ್ಟು ಜನಾಂಗಕ್ಕೆ ಭೌಗೋಳಿಕ ಮತ್ತು ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವರನ್ನು ಬುಡಕಟ್ಟು ಜನಾಂಗವೆಂದು ಘೋಷಿಸಿ ಎಸ್‌ಟಿ ಟ್ಯಾಗ್ ನೀಡುವುದರೊಂದಿಗೆ ಜನಾಂಗದ ಸಮಗ್ರ ಸಬಲೀಕರಣಕ್ಕೆ ಸರಕಾರ ಮುಂದಾಗಬೇಕು, ಸಂವಿಧಾನದ 25 ಮತ್ತು 26 ನೇ ವಿಧಿಗಳಡಿಯಲ್ಲಿ ಕೊಡವ ಬುಡಕಟ್ಟು ಜನಾಂಗದ “ಸಂಸ್ಕಾರ ಗನ್” ಗೆ ಸಂವಿಧಾನಿಕ ಖಾತ್ರಿ ನೀಡಬೇಕು. ಕೊಡವ ಭಾಷೆಯನ್ನು 8ನೇ ಶೆಡ್ಯೂಲ್‌ಗೆ ಸೇರಿಸಬೇಕು, ಯುಎನ್‌ಒ ಮೂಲಕ ವಿಶೇ? ಜನಾಂಗೀಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಿಎನ್‌ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಅಲ್ಮಂಡ ಜೈ, ಮಂದಪಂಡ ದೀಪು, ಕಾಟುಮಣಿಯಂಡ ಉಮೇಶ್, ಕಾಟುಮಣಿಯಂಡ ಲೆಹರ್ ಮೊದಲಾದವರು ಪಾಲ್ಗೊಂಡಿದ್ದರು.

Gayathri SG

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

2 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

13 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

28 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

50 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago