News Karnataka Kannada
Tuesday, April 30 2024
ಮಡಿಕೇರಿ

ಪಾಕ್ ವಿರುದ್ಧ ಭಾರತಕ್ಕೆ ಸೋಲು: ಹೃದಯಾಘಾತದಿಂದ ಅಭಿಮಾನಿ ಸಾವು

Death 20072021
Photo Credit :

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋತಿರುವುದಕ್ಕೆ ಮನನೊಂದ ಹಿರಿಯ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ (55) ಎಂಬವರೇ ಮೃತರು
ಭಾನುವಾರ ರಾತ್ರಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ತಕ್ಷಣ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು