ವಿರಾಜಪೇಟೆ: ಬೈಕ್ ಅಪಘಾತದಲ್ಲಿ ಗ್ರಾಮ ಲೆಕ್ಕಿಗರೊಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಿಟ್ಟಂಗಾಲ ಬಳಿ ನಡೆದಿದೆ. ಅಮ್ಮತ್ತಿ ಹೋಬಳಿಯ ಗ್ರಾಮಲೆಕ್ಕಿಗರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತ ವಿಜಯನಗರ ಜಿಲ್ಲೆಯ ಕಡಬಗೇರಿ ಗ್ರಾಮದ ಪ್ರವೀಣ್ (24) ಮೃತ ದುರ್ದೈವಿ.
ಭಾನುವಾರ ರಾತ್ರಿ ವೇಳೆಗೆ ಕಾರ್ಯನಿಮಿತ್ತ ಪೊನ್ನಂಪೇಟೆಗೆ ತೆರಳಿ ಹಿಂತಿರುಗುತ್ತಿದ್ದಾಗ ಬಿಟ್ಟಂಗಾಲ ಜಂಕ್ಷನ್ ಬಳಿ ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ. ಘಟನೆಯಿಂದ ಪ್ರವೀಣ್ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ಪ್ರವೀಣ್ ನಾಲ್ಕು ವರ್ಷದಿಂದ ಅಮ್ಮತ್ತಿ ಹೋಬಳಿಯಲ್ಲಿ ಬಿಳುಗುಂದ ವ್ಯಾಪ್ತಿಯ ಗ್ರಾಮ ಲೆಕ್ಕಿಗರಾಗಿ ಸೇವೆ ಸಲ್ಲಿಸುತ್ತಿದ್ದರು.
ಸೋಮವಾರ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮನೆಯವರಿಗೆ ಒಪ್ಪಿಸಲಾಯಿತು. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಅಪಘಾತದಲ್ಲಿ ಗ್ರಾಮ ಲೆಕ್ಕಿಗ ಸಾವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.