News Karnataka Kannada
Saturday, May 04 2024
ಮಡಿಕೇರಿ

ಬೈಲಕುಪ್ಪೆ ಟಿಬೆಟನ್ ಲಾಮಾ ಕ್ಯಾಂಪ್‌ನಲ್ಲಿ 23 ಕೋವಿಡ್‌ ಪ್ರಕರಣ ಪತ್ತೆ

Ita Covid19 Mng 06082021
Photo Credit :

ಪಿರಿಯಾಪಟ್ಟಣ: ತಾಲ್ಲೂಕಿನಲ್ಲಿ ಕಂಡು ಬಂದಿರುವ 29 ಕೋವಿಡ್‌ ಪ್ರಕರಣಗಳಲ್ಲಿ ಬೈಲಕುಪ್ಪೆ ಟಿಬೆಟನ್ ಲಾಮಾ ಕ್ಯಾಂಪ್‌ನಲ್ಲೇ 23 ಪ್ರಕರಣ ಪತ್ತೆಯಾಗಿವೆ. ಟಿಬೆಟನ್ ಸೆಟಲ್ಮೆಂಟ್ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು  ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು ತಿಳಿಸಿದರು.

ತಾಲ್ಲೂಕಿನಲ್ಲಿ ಕೊರೊನಾ ರೂಪಾಂತರ ವೈರಸ್ ಹರಡುವಿಕೆಯನ್ನು ಸಂಪೂರ್ಣ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ತಾಲ್ಲೂಕಿನ ಬೈಲಕುಪ್ಪೆ ಟಿಬೆಟ್ ಕ್ಯಾಂಪ್‌ಗೆ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದರು.

ತಾಲ್ಲೂಕಿಗೆ ಹೊರ ರಾಜ್ಯಗಳಿಂದ ಆಗಮಿಸುವವರು ಹಾಗೂ ಶಬರಿಮಲೆ ಯಾತ್ರಾರ್ಥಿಗಳಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. 10 ದಿನ ನಿಗಾ ವಹಿಸಲಾಗುವುದು. ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ’ ಎಂದು ಹೇಳಿದರು.

ತಾಲ್ಲೂಕು ಆರೋಗ್ಯ ಹಿರಿಯ ನಿರೀಕ್ಷಣಾಧಿಕಾರಿ ಕೆ.ಆರ್.ಪ್ರಕಾಶ್, ಸಿಬ್ಬಂದಿ ಕಿರಣ್ ಕುಮಾರ್, ಬೈಲಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀವಳ್ಳಿ, ಸಿಬ್ಬಂದಿ ಮುಜೀಬ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು