News Karnataka Kannada
Tuesday, May 07 2024
ಮಡಿಕೇರಿ

ಭಾಗಮಂಡಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ

Kpcc President
Photo Credit :

ಮಡಿಕೇರಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೊಡಗಿನ ಭಾಗಮಂಡಲ ಮತ್ತು ತಲಕಾವೇರಿಗೆ ಆಗಮಿಸಿದ್ದಾರೆ. ಮೈಸೂರು ಮೂಲಕ ಕೊಡಗಿನ ಹೆಬ್ಬಾಗಿಲು ಕುಶಾಲನಗರಕ್ಕೆ ಆಗಮಿಸಿದ ವೇಳೆ ಅವರನ್ನು ಪುಷ್ಟಮಳೆ ಸುರಿದು ಸ್ವಾಗತಿಸಲಾಯಿತು. ಇದೇ ವೇಳೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯ ಎರಡು ಬದಿಯಲ್ಲಿ ಜೆಸಿಬಿ ಮೂಲಕ ಹೂವಿನ ಮಳೆಗೆರೆದರಲ್ಲದೆ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆಪಿಸಿಸಿ ಅಧ್ಯಕ್ಷರ ಸ್ವಾಗತದ ಬಳಿಕ ಇತ್ತ ಕಾರ್ಯಕರ್ತರು ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಅತ್ತ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್‍ ಅವರು ನೇರವಾಗಿ ಭಾಗಮಂಡಲಕ್ಕೆ ತೆರಳಿದ ಅವರು ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರು ಕುಡಿದು ಬಳಿಕ ಭಗಂಡೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಬೇಕಾಗಿತ್ತಾದರೂ ಸೂತಕದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ತೆರಳಲಿಲ್ಲ. ಅವರ ಬದಲಿಗೆ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಭಗಂಡೇಶ್ವರ ಸೇರಿದಂತೆ ಗಣಪತಿ, ಸುಬ್ರಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು.

ಇದೇ ವೇಳೆ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಕಾರ್ಯಗತವಾಗುವವರೆಗೆ ನಿರಂತರ ಹೋರಾಟ ನಡೆಸುವುದಾಗಿ ಹೇಳಿದರಲ್ಲದೆ, ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನದ ನಂತರ ಭಗವಾನ್ ಭಗಂಡೇಶ್ವರನ ಆಶೀರ್ವಾದ ಪಡೆದು . ನಾಡಿನ ಒಳಿತಿಗಾಗಿ ಕೈಗೊಂಡಿರುವ ಮೇಕೆದಾಟು ಯಾತ್ರೆ ಯಶಸ್ವಿಯಾಗಲೆಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಈ ವೇಳೆ ಚಂಡೆಮದ್ದಳೆಯೊಂದಿಗೆ ಸಂಭ್ರಮಿಸಲಾಯಿತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ಆರ್.ವಿ. ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು