News Karnataka Kannada
Monday, May 06 2024
ಮಡಿಕೇರಿ

ಮಡಿಕೇರಿ ನಗರದಲ್ಲಿ ಎರಡು ಕೋಟಿ ರೂ ವೆಚ್ಚದಲ್ಲಿ ವಿದ್ಯುತ್‌ ಚಿತಾಗಾರ

Crematorium
Photo Credit :

ಮಡಿಕೇರಿ : ಮಡಿಕೇರಿ ನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒಂದು ವರ್ಷದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗುವುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ.
ನಗರದ ಮಲ್ಲಿಕಾರ್ಜುನ ನಗರ ಬಳಿ ಸ್ಮಶಾನ ಭೂಮಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
14 ಮತ್ತು 15 ನೇ ಹಣಕಾಸು ಯೋಜನೆಯಡಿ 20 ಲಕ್ಷ ರೂ ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗೆಯೇ ಚೈನ್‍ಗೇಟ್ ಬಳಿಯಲ್ಲಿಯು ಸಹ ಸ್ಮಶಾನ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು.
ಕೋವಿಡ್ 19 ಹಿನ್ನೆಲೆ ಸ್ಮಶಾನವು ಅತಿ ಮುಖ್ಯವಾಗಿದೆ. ಆ ದಿಸೆಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗುವುದು ಎಂದು ಶಾಸಕರು ಹೇಳಿದರು.ನಗರಸಭಾ ಸದಸ್ಯರಾದ ಕಲಾವತಿ, ಅರುಣ್ ಶೆಟ್ಟಿ, ಉಮೇಶ್ ಸುಬ್ರಮಣಿ, ಸಬೀತಾ, ಪೌರಾಯುಕ್ತರಾದ ರಾಮ್‍ದಾಸ್, ಕಿರಿಯ ಎಂಜಿನಿಯರ್ ಶಮಂತ್ ಕುಮಾರ್, ಪ್ರಮುಖರಾದ ಭರತ್, ಪ್ರವೀಣ್ ಇತರರು ಹಾಜರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು